Tuesday, August 9, 2022

Latest Posts

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ದಂಡ ಸಹಿತ 20 ವರ್ಷ ಸಜೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ವೀರಾಜಪೇಟೆ ನ್ಯಾಯಾಲಯವು 20 ವರ್ಷ ಶಿಕ್ಷೆ ಹಾಗೂ 30 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.
ವೀರಾಜಪೇಟೆ ತಾಲೂಕಿನ ಕೊಳತ್ತೋಡು ಬೈಗೋಡು ಗ್ರಾಮದಲ್ಲಿ ಘಟನೆ ನಡೆದಿರುವ ಬಗ್ಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ರ ಡಿ.6ರಂದು ಮೊಕದ್ದಮೆ ದಾಖಲಾಗಿತ್ತು.
ಪ್ರಕರಣವನ್ನು ವೀರಾಜಪೇಟೆ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನಿರೀಕ್ಷಕ ಎನ್. ಕುಮಾರ ಆರಾಧ್ಯ ಅವರು ತನಿಖೆ ನಡೆಸಿ 2018ರ ಡಿ.20ರಂದು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ವೀರಾಜಪೇಟೆಯ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕ ಯಾಸಿನ್ ಅಹಮ್ಮದ್ ವಾದ ಮಂಡಿಸಿ ಪ್ರಕರಣದ ಆರೋಪಿಗೆ ಶಿಕ್ಷೆಯಾಗುವಲ್ಲಿ ಕಾರಣರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss