ಹೊಸದಿಗಂತ ವರದಿ ವಿಜಯಪುರ:
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ (22) ಶಿಕ್ಷೆಗೊಳಗಾದ ಆರೋಪಿ.
ಈ ಆರೋಪಿ ಏ.2, 2021 ರಂದು ವಿಜಯಪುರ ನಗರದ ಗಾಂಧಿನಗರ ಬಳಿ ದನ ಮೇಯಿಸುವಾಗ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ್ದನು.
ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ ಅವರು, ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ, ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದರು.