ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ವಿದ್ಯುತ್‌ಚಾಲಿತ 200 ಬಸ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಪಿಎಂ ಇ-ಬಸ್ ಸೇವಾ ಯೋಜನೆಯಲ್ಲಿ ವಾಯುವ್ಯ ಸಾರಿಗೆ ಹುಬ್ಬಳ್ಳಿ-ಬೆಳಗಾವಿ ನಗರಗಳು ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಅವಳಿ ನಗರದಲ್ಲಿ ಇವಿ ಬಸ್ ಗಳು ಸಂಚರಿಸಲಿವೆ ಎಂದು ವಾಯುವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ 100 ಹಾಗೂ ಬೆಳಗಾವಿಗೆ 100 ಇವಿ ಬಸ್ ಗಳು ಮಂಜೂರಾಗಿವೆ. ಈಗಾಗಲೇ ಡಿಪೋ ನಿರ್ಮಾಣಕ್ಕೆ ಡಿಪಿಆರ್ ಸಲ್ಲಿಸಲಾಗಿದ್ದು, ಕೇಂದ್ರದಿಂದ ಅನುಮೋದನೆ ಸಿಕ್ಕರೆ ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ತಲಾ ಐದು ಎಕರೆ ಸ್ಥಳಗಳಲ್ಲಿ ಡಿಪೋ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ವಿದ್ಯುತ್ ಚಾಲಿತ 200 ಬಸ್: ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್
