ಉತ್ತರ ಭಾರತದಲ್ಲಿ 200 ವಿಮಾನಗಳ ಹಾರಾಟ ವ್ಯತ್ಯಯ, 24 ರೈಲುಗಳ ಸಂಚಾರಕ್ಕೂ ಮಂಜು ಅಡ್ಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದಟ್ಟವಾದ ಮಂಜಿನಿಂದಾಗಿ ಉತ್ತರ ಭಾರತದ ವಿವಿಧ ನಗರಗಳಲ್ಲಿ ವಿಮಾನ ಸಂಚಾರ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದರಿಂದ 202 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಂಡಿ) ಮಾಹಿತಿಯ ಪ್ರಕಾರ, ದೆಹಲಿಯಲ್ಲಿ 16 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಇದ್ದು, ಸಾಮಾನ್ಯಕ್ಕಿಂತ ಮೂರು ಡಿಗ್ರಿಗಳಷ್ಟು ಕಡಿಮೆಯಾಗಿದೆ. ಕನಿಷ್ಠ ತಾಪಮಾನ 7.6 ಡಿಗ್ರಿ ಸೆಲ್ಸಿಯಸ್ ಇದೆ.

ಪ್ರತಿಕೂಲ ಹವಾಮಾನದಿಂದಾಗಿ ಅಮೃತಸರ ಮತ್ತು ಗುವಾಹಟಿಗೆ ಬರುವ ಮತ್ತು ಹೋಗುವ ಎಲ್ಲಾ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಸ್ಪೈಸ್‌ಜೆಟ್ ಹೇಳಿದೆ. ದೆಹಲಿ, ಅಮೃತಸರ, ಲಕ್ನೋ, ಬೆಂಗಳೂರು ಮತ್ತು ಗುವಾಹಟಿ ಮಾರ್ಗಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಇಂಡಿಗೋ ತಿಳಿಸಿದೆ.

ಹವಾಮಾನ ಇದೇ ರೀತಿ ಮುಂದುವರಿದರೆ ಕಡಿಮೆ ಗೋಚರತೆಯಿಂದಾಗಿ ವಿಮಾನಗಳು ರದ್ದಾಗಬಹುದು ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ. ಹವಾಮಾನ ಸಂಬಂಧಿತ ಪರಿಸ್ಥಿತಿಗಳಿಂದಾಗಿ ದೆಹಲಿಯಿಂದ ಹೊರಡುವ ಕನಿಷ್ಠ 24 ರೈಲುಗಳು ವಿಳಂಬವಾಗಿವೆ. ಅಯೋಧ್ಯೆ ಎಕ್ಸ್‌ಪ್ರೆಸ್ ನಾಲ್ಕು ಗಂಟೆಗಳ ಕಾಲ ವಿಳಂಬವಾಗಿ ಸಂಚರಿಸಿದೆ. ಗೋರಖ್‌ಧಾಮ್ ಎಕ್ಸ್‌ಪ್ರೆಸ್ ಎರಡು ಗಂಟೆಗಳಿಗಿಂತ ಹೆಚ್ಚು ತಡವಾಗಿ ಪ್ರಯಾಣ ಬೆಳೆಸಿದೆ. ಬಿಹಾರ ಕ್ರಾಂತಿ ಎಕ್ಸ್‌ಪ್ರೆಸ್ ಮತ್ತು ಶ್ರಮ ಶಕ್ತಿ ಎಕ್ಸ್‌ಪ್ರೆಸ್ ಮೂರು ಗಂಟೆಗಳಿಗೂ ಹೆಚ್ಚು ವಿಳಂಬವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!