Wednesday, July 6, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 200 ಮಂದಿಗೆ ಕೋವಿಡ್ ಪಾಸಿಟಿವ್, 215 ಮಂದಿ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 200 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
215 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ಮೂರು ಮಂದಿ ಸೋಂಕಿಗೆ ಬಲಿಯಾಗಿದ್ದು, ಶೇ. 3.56 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 97225ಕ್ಕೆ ಏರಿಕೆಯಾಗಿದೆ. ಈ ಪೈಕಿ 1912 ಸಕ್ರಿಯ ಪ್ರಕರಣಗಳು. 93938 ಸೋಂಕಿತರು ಗುಣಮುಖರಾಗಿದ್ದಾರೆ. 1375 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 81214 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 9895417 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss