ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಡಿಎಂ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಸುಲ್ತಾನ್ ತಿಪ್ಪಸಂದ್ರ ನಿವಾಸಿಗಳಾದ ಸಮೀರ್ ಪಾಷಾ, ತಮೀಮ್ ಖಾನ್ ಮತ್ತು ಶಾಹಿದ್ ಪಾಷಾ ಬಂಧಿತ ಆರೋಪಿಗಳು.
ಬಂಧಿತನಿಂದ 20 ಸಾವಿರ ಮೌಲ್ಯದ 5.4 ಗ್ರಾಂ ತೂಕದ ಎಂಡಿಎಂ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಒಂದು ಮಾರುತಿ ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಒಂದು ಡ್ರ್ಯಾಗರ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಕೋಲಾರ ನಗರದ ಸುಲ್ತಾನ್ ತಿಪ್ಪಸಂದ್ರ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ.