ಹೊಸದಿಗಂತ ಡಿಜಿಟಲ್ ಡೆಸ್ಕ್:
2002ರಲ್ಲಿ ನಡೆದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ಖುಲಾಸೆಗೊಂಡಿದ್ದಾರೆ.
ವಿಶೇಷ ಸಿಬಿಐ ಕೋರ್ಟ್ ಏಳು ವರ್ಷಗಳ ಹಿಂದೆ ರಹೀಮ್ ಸಿಂಗ್ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.
ಆದರೆ ಗುರ್ಮೀತ್ ಸಿಂಗ್ ಇನ್ನೂ ಎರಡು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿದ್ದು 20 ವರ್ಷಗಳ ಜೀವಾವಧಿ ಶಿಕ್ಷೆಯಿದೆ. ಆದ್ದರಿಂದ ಜೈಲಿನಲ್ಲೇ ಇರಲಿದ್ದಾರೆ.
2019ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಸಿರ್ಸಾ ಮೂಲದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆಗೆ ಸಂಬಂಧಿಸಿದಂತೆ ಸಿಂಗ್ ಮತ್ತು ಇತರ ಮೂವರು ಕುಲದೀಪ್ ಸಿಂಗ್, ನಿರ್ಮಲ್ ಸಿಂಗ್ ಮತ್ತು ಕ್ರಿಶನ್ ಲಾಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಗುರ್ಮೀತ್ ಸಿಂಗ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗುರ್ಮೀತ್ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ.



