2008ರ ಉಳ್ಳಾಲ ಭಯೋತ್ಪಾದನಾ ಪ್ರಕರಣ: ಯಾಸೀನ್ ಭಟ್ಕಳ್ ವಿಚಾರಣೆ ಪುನರಾರಂಭ

ಹೊಸದಿಗಂತ ವರದಿ,ಮಂಗಳೂರು:

ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾದ ಭಯೋತ್ಪಾದನಾ ಪ್ರಕರಣದಲ್ಲಿ ಭಾಗಿಯಾಗಿದ್ದ ಯಾಸೀನ್ ಭಟ್ಕಳ್ ವಿರುದ್ಧದ ವಿಚಾರಣೆ ಮತ್ತೆ ಆರಂಭಗೊಂಡಿದೆ.

ಕಳೆದ ಕೆಲವು ವರ್ಷಗಳಿಂದ ಆರೋಪಿಯ ವಿಚಾರಣೆಯಾಗದೇ ನ್ಯಾಯಾಲಯಲ್ಲಿ ಬಾಕಿಯಿದ್ದು, ಇದೀಗ ಮತ್ತೆ ಆರಂಭಗೊಂಡಿದೆ. ಗುರುವಾರ ಮೊದಲ ಬಾರಿಗೆ ವಿಡಿಯೋ ಕಾನರೆನ್ಸ್ ಮೂಲಕ ಯಾಸೀನ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ
2008 ರ ಅಕ್ಟೋಬರ್ ೪ರಂದು, ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಪ್ರದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ನಿರ್ವಹಿಸುತ್ತಿದ್ದರು ಎಂಬ ಮಾಹಿತಿಯ ಮೇರೆಗೆ, ಡಿಸಿಐಬಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದರು.

ಸದ್ಯ ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ.ನಂ. 242/2008 ರಂತೆ ದಾಖಲಾಗಿ, ಐಎಫ್‌ಎಕ್ಸ್ ಹಾಗೂ ಇತರ ಸ್ಪೋಟಕ ವಸ್ತುಗಳು ಸಹಿತ ಸಿಕ್ಕಿಬಿದ್ದ ಆರೋಪಿಗಳಲ್ಲಿ ಒಟ್ಟು 7 ಜನರನ್ನು ಬಂಸಲಾಗಿದ್ದು, ಉಳಿದ 6 ಆರೋಪಿಗಳು ತಲೆಮರೆಸಿಕೊಂಡಿದ್ದರು.

ಈ ಪ್ರಕರಣದಲ್ಲಿ, ಆರೋಪಿಗಳಾದ ಸಯ್ಯದ್ ಮೊಹಮ್ಮದ್ ನೌಶಾದ್, ಅಹಮ್ಮದ್ ಬಾವ ಅಬೂಬಕ್ಕರ್, ಫಕೀರ್ ಅಹಮ್ಮದ್ ಯಾನೆ ಫಕೀರ್ ಈ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮತ್ತು ಆರೋಪಿಗಳಾದ ಮೊಹಮ್ಮದ್ ಆಲಿ, ಜಾವೇದ್ ಆಲಿ, ಮೊಹಮ್ಮದ್ ರಫೀಕ್, ಶಬ್ಬೀರ್ ಭಟ್ಕಳ್ ಇವರನ್ನು ಖುಲಾಸೆಗೊಳಿಸಿ 2017 ರ ಎ.12ರಂದು ಅಂತಿಮ ತೀರ್ಪು ನೀಡಲಾಗಿತ್ತು.

ಆದರೆ ಆರೋಪಿಗಳಲ್ಲಿ ಪ್ರಮುಖನಾದ ಯಾಸೀನ್ ಭಟ್ಕಳ ಪ್ರಕರಣದ ವಿಚಾರಣಾ ಹಂತದಲ್ಲಿ ತಲೆಮರೆಸಿಕೊಂಡಿದ್ದ ಕಾರಣ, ವಿಚಾರಣೆ ಬಾಕಿ ಉಳಿದಿತ್ತು.

ಪ್ರಸ್ತುತ, ಯಾಸೀನ್ ಭಟ್ಕಳ ಹೈದರಾಬಾದ್‌ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದನು.

ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಕ್ರಮಗಳನ್ನು ಕೈಗೊಂಡು ತಿಹಾರ್ ಜೈಲಿನ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಆರೋಪಿಯನ್ನು 2025 ರ ಜು.24 ರಂದು ಜೆ.ಎಮ್.ಎಫ್.ಸಿ ನ್ಯಾಯಾಲಯದ ಮುಂದೆ ವಿಡಿಯೋ ಕಾನರೆನ್ಸ್ ಮುಖಾಂತರ ಹಾಜರುಪಡಿಸಲಾಗಿದೆ. ಮುಂದಿನ ವಿಚಾರಣೆ ಆ.20ರಂದು ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!