2015ರ ಡ್ರಗ್ಸ್ ಪ್ರಕರಣ: ಪಂಜಾಬ್ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾಗೆ 14 ದಿನಗಳ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2015ರ ಡ್ರಗ್ಸ್ ಪ್ರಕರಣಕ್ಕೆ (2015 Drugs Case) ಸಂಬಂಧಿಸಿದಂತೆ ಪಂಜಾಬ್‌ನ (Punjab) ಫಜಿಲ್ಕಾ ಜಿಲ್ಲೆಯ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ (Sukhpal Khaira) ಅವರನ್ನು ಶನಿವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಿಗಿ ಭದ್ರತೆಯ ನಡುವೆ, ಸುಖಪಾಲ್ ಖೈರಾ ಅವರ ಎರಡು ದಿನಗಳ ಪೊಲೀಸ್ ಕಸ್ಟಡಿ ಶನಿವಾರ ಕೊನೆಗೊಂಡ ನಂತರ ಜಲಾಲಾಬಾದ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೋಲಾತ್ ಶಾಸಕ ಸುಖಪಾಲ್ ಖೈರಾ ಅವರನ್ನು ಚಂಡೀಗಢದ ನಿವಾಸದಲ್ಲಿ ಗುರುವಾರ ಬಂಧಿಸಲಾಗಿತ್ತು.

2015ರ ಮಾರ್ಚ್‌ನಲ್ಲಿ ಫಜಿಲ್ಕಾದ ಜಲಾಲಾಬಾದ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಖಪಾಲ್ ಖೈರಾ ಅವರ ಆಪ್ತರೆಂದು ಹೇಳಲಾದ ಗುರುದೇವ್ ಸಿಂಗ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಯಿತು. ಇದಾದ ನಂತರ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿಯಲ್ಲಿ ಶಿಕ್ಷೆ ವಿಧಿಸಲಾಯಿತು.

ಪೊಲೀಸರು ಅವರಿಂದ 2 ಕೆಜಿ ಹೆರಾಯಿನ್, 24 ಚಿನ್ನದ ಬಿಸ್ಕತ್ತುಗಳು, ಒಂದು ದೇಶ ನಿರ್ಮಿತ ಪಿಸ್ತೂಲ್, .315-ಬೋರ್ ಪಿಸ್ತೂಲ್ ಮತ್ತು ಎರಡು ಪಾಕಿಸ್ತಾನಿ ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!