Monday, August 8, 2022

Latest Posts

2019-20 ನೇ ಸಾಲಿನಲ್ಲಿ ಮಂಗಳೂರಿನಲ್ಲಿ 9.5 ಕೋ.ರೂ. ಮೊತ್ತದ ಸೊತ್ತುಗಳು ಕಳವು

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2019-20 ನೇ ಸಾಲಿನಲ್ಲಿ ವಿವಿಧ ಕಳವು ಪ್ರಕರಣಗಳಿಗೆ ಸಂಬಂಧಿಸಿ 9,05,35,412 ಮೌಲ್ಯದ ಸೊತ್ತುಗಳು ಕಳವಾಗಿದ್ದು, ಅದರಲ್ಲಿ ಒಟ್ಟು ರೂ.5,37,86,517ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಸಂಬಂಧಪಟ್ಟವರಿಗೆ ಒಪ್ಪಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಕಳವಾದ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ವಸ್ತುಗಳನ್ನು ಫಿರ್ಯಾದುದಾರರಿಗೆ ಹಿಂತಿರುಗಿಸುವ ಸಂಬಂಧ ಶನಿವಾರ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭ ಅವರು ಕಳವು ಪ್ರಕರಣಗಳಲ್ಲಿ ಸೊತ್ತು ಮತ್ತು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಸಹಾಯಕ ಪೊಲೀಸ್ ಆಯುಕ್ತರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ವರ್ಗದ ಕಾರ್ಯ ದಕ್ಷತೆಯನ್ನು ಶ್ಲಾಘಿಸಿದರು. ಅಲ್ಲದೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನವನ್ನು ನೀಡಿ ಅಭಿನಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss