ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ನಡೆದ ಉಗ್ರರ ದಾಳಿಯ ಆರೋಪಿಯಾಗಿದ್ದ 32 ವರ್ಷದ ವ್ಯಕ್ತಿಯೋರ್ವ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಈ ಪ್ರಕರಣದಲ್ಲಿ ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೆ ಸೇರಿದಂತೆ 19 ಮಂದಿ ಆರೋಪಿಗಳಾಗಿದ್ದರು.
ಫೆಬ್ರವರಿ 14, 2019 ರಂದು ಪುಲ್ವಾಮಾದ ಲೆಥ್‌ಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕ ತನ್ನ ಸ್ಫೋಟಕ ತುಂಬಿದ ಕಾರನ್ನು ಸಿಆರ್ ಪಿಎಫ್ ಬೆಂಗಾವಲು ಪಡೆಗೆ ಡಿಕ್ಕಿ ಹೊಡೆದಾಗ ನಲವತ್ತು ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದರು ಮತ್ತು ಎಂಟು ಮಂದಿ ಗಾಯಗೊಂಡಿದ್ದರು.
ಕುಚೇಯ್ ಕಿಶ್ತ್ವಾರ್ ಜಿಲ್ಲಾ ಜೈಲಿನಲ್ಲಿ ಅನಾರೋಗ್ಯಕ್ಕೆ ಒಳಗಾದ ನಂತರ ಅವರನ್ನು ಸೆಪ್ಟೆಂಬರ್ 17 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿ ತಿಳಿಸಿದರು.