Monday, August 8, 2022

Latest Posts

2020- 21ನೇ ಸಾಲಿನ ಸರಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ನೇಮಕ

ಹೊಸ ದಿಗಂತ ವರದಿ, ಉಡುಪಿ:

ಕರ್ನಾಟಕ ವಿಧಾನ ಸಭೆಯ 2020 – 21ನೇ ಸಾಲಿನ ಸರಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರನ್ನು ನೇಮಕ ಮಾಡಿ ವಿಧಾನಸಭಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜ, ದತ್ತಾತ್ರೇಯ ಸಿ. ಪಾಟೀಲ್ ರೇವೂರು, ಸೋಮನಗೌಡ ಬಿ. ಪಾಟೀಲ್, ಉದಯ ಬಿ. ಗರುಡಾಚಾರ್, ವೆಂಕಟರೆಡ್ಡಿ ಮುದ್ನಾಳ್, ಎಂ.ಬಿ. ಪಾಟೀಲ್, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ., ಪ್ರಿಯಾಂಕ್ ಖರ್ಗೆ, ಎನ್.ಎಸ್. ಸುಬ್ಬಾರೆಡ್ಡಿ, ಎಸ್. ರಾಮಪ್ಪ, ಡಾ. ಕೆ. ಶ್ರೀನಿವಾಸಮೂರ್ತಿ ಮತ್ತು ರವೀಂದ್ರ ಶ್ರೀಕಂಠಯ್ಯ ಅವರನ್ನು ಸರಕಾರಿ ಭರವಸೆಗಳ ಸಮಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ ಸಭಾಧ್ಯಕ್ಷರು ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ಸರಕಾರಿ ಭರವಸೆಗಳ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ರಘುಪತಿ ಭಟ್ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss