ಹೊಸದಿಗಂತ ಡಿಜಿಟಲ್ ಡೆಸ್ಕ್:
2020 ರ ದೆಹಲಿ ಗಲಭೆ ಪ್ರಕರಣದಲ್ಲಿ ದೆಹಲಿ ಸಚಿವ ಕಪಿಲ್ ಮಿಶ್ರಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
ಪ್ರಕರಣದ ದೂರುದಾರ ಯಮುನಾ ವಿಹಾರ್ ನಿವಾಸಿ, ಮೊಹಮ್ಮದ್ ಇಲ್ಯಾಸ್ ಅವರು, ಆಗಿನ ದಯಾಳ್‌ಪುರದ ಎಸ್‌ಎಚ್‌ಒ ಆಗಿದ್ದ ಕಪಿಲ್ ಮಿಶ್ರಾ ಮತ್ತು ಬಿಜೆಪಿ ಶಾಸಕ ಮೋಹನ್ ಸಿಂಗ್ ಬಿಶ್ತ್, ಮಾಜಿ ಬಿಜೆಪಿ ಶಾಸಕರಾದ ಜಗದೀಶ್ ಪ್ರಧಾನ್ ಮತ್ತು ಸತ್ಪಾಲ್ ಸಂಸದ್ ಸೇರಿದಂತೆ ಇತರ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಕಪಿಲ್ ಮಿಶ್ರಾ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.