April 7, 2026
Tuesday, April 7, 2026
spot_img

2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ: ರಕ್ಷಿತ್ ಶೆಟ್ಟಿಗೆ ಒಲಿದ ಬೆಸ್ಟ್ ಆಕ್ಟರ್ ಅವಾರ್ಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ ಆಗಿದೆ. ‘777 ಚಾರ್ಲಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

‘ಮ್ಯೂಟ್’ ಸಿನಿಮಾದ ಅಭಿನಯಕ್ಕಾಗಿ ಅರ್ಚನಾ ಜೋಯಿಸ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ (777 Charlie) ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.ಹೃದಯಶಿವ ನಿರ್ದೇಶನ ಮಾಡಿದ ‘ಬಿಸಿಲು ಕುದುರೆ’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ.ಯುವರತ್ನಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಲಭಿಸಿದೆ.

‘ದೊಡ್ಡಹಟ್ಟಿ ಬೋರೆಗೌಡ’ ಸಿನಿಮಾಗೆ ರಘು ಕೆ.ಎಂ. ಅವರು ನಿರ್ದೇಶನ ಮಾಡಿದ್ದಾರೆ. ಲೋಕೇಶ್ ಕೆ.ಎಂ ಅವರು ನಿರ್ಮಾಣ ಮಾಡಿದ್ದಾರೆ. ‘777 ಚಾರ್ಲಿ’ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದು, ಕಿರಣ್ ರಾಜ್ ಕೆ. ನಿರ್ದೇಶಿಸಿದ್ದಾರೆ.

‘ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್ ಅವರು ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ತಿಯಾಜ್ ಸುಲ್ತಾನ್ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ. ‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದೆ. ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !