ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಷ್ಠಿತ ಸೈಮಾ ಪ್ರಶಸ್ತಿ ಮತ್ತೆ ಬಂದಿದೆ. ಈ ಅವಾರ್ಡ್ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಸೈಮಾ ಎಂದರೆ, ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್ ಎಂದು ಕರೆಯಲಾಗುತ್ತದೆ. ಲಿಸ್ಟ್‌ನಲ್ಲಿವೆ ಈ ಎರಡು ಕನ್ನಡ ಸಿನಿಮಾಗಳಿವೆ ಯಾವುದು ನೋಡಿ..
ಈ ಪ್ರಶಸ್ತಿಯನ್ನು ಪ್ರಮುಖವಾಗಿ ಸೌತ್ ಸಿನಿಮಾರಂಗದಲ್ಲಿ ತಯಾರಾಗುವ ಸಿನಿಮಾಗಳಿಗೆ ಮಾತ್ರವೇ ಕೊಡಲಾಗುತ್ತದೆ. ಪ್ರತಿ ಬಾರಿ ಈ ಪ್ರಶಸ್ತಿ ಪಡದುಕೊಳ್ಳುವ ಸಿನಿಮಾ ಯಾವುವು, ಕಲಾವಿದರು ಯಾರು ಎನ್ನುವ ಕುತೂಹಲ ಇದ್ದೇ ಇರುತ್ತದೆ. 2024ರ ಸೈಮಾ ನಾಮಿನೇಷನ್ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನ ಯಾವ ಸಿನಿಮಾಗಳು ರೇಸ್‌ನಲ್ಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ.