2024ರ ಚುನಾವಣೆಯ ಫಲಿತಾಂಶ ಜನರನ್ನು ಆಶ್ಚರ್ಯಗೊಳಿಸಲಿದೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೂರು ನಗರಗಳ ಪ್ರವಾಸದಲ್ಲಿ ಅಮೆರಿಕದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಕುರಿತು ಮಾತನಾಡಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಜನರನ್ನು ಆಶ್ಚರ್ಯಗೊಳಿಸಲಿದೆ ಎಂದಿದ್ದಾರೆ.

“ಮುಂದಿನ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ. ಅದರ ಫಲಿತಾಂಶ ಜನರನ್ನು ಆಶ್ಚರ್ಯಗೊಳಿಸಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ರಾಹುಲ್ ಗಾಂಧಿ ವಾಷಿಂಗ್ಟನ್ ಡಿಸಿಯಲ್ಲಿ ಹೇಳಿದರು.

ಭಾರತದಲ್ಲಿ ಪ್ರತಿಪಕ್ಷಗಳ ಏಕತೆಯ ಬಗ್ಗೆ ಮಾತನಾಡುತ್ತಾ, ಭಾರತದಲ್ಲಿ ಪ್ರತಿಪಕ್ಷಗಳು ಚೆನ್ನಾಗಿ ಒಗ್ಗೂಡುತ್ತಿವೆ. ನಾವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಸಾಕಷ್ಟು ಒಳ್ಳೆಯ ಕೆಲಸಗಳು ನಡೆಯುತ್ತಿವೆ ಎಂದರು.

ಬಹುಪಾಲು ಸಮಾನ ಮನಸ್ಕ ಹಲವು ವಿರೋಧ ಪಕ್ಷಗಳು ಈಗ 2024ರ ನಿರ್ಣಾಯಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಎದುರಿಸಲು ಜೊತೆಯಾಗಿ ನಿಲ್ಲುತ್ತಿವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!