ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡದ ಅಮರೇಶ ನುಗಡೋಣಿ ಅವರ ’ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಅಕಾಡೆಮಿ ಪ್ರಶಸ್ತಿ ಒಲಿದು ಬಂದಿದೆ.
ಈ ಬಾರಿ ಡಾ. ಸಿದ್ಧಲಿಂಗ ಪಟ್ಟಣ ಶೆಟ್ಟಿ, ಡಾ. ಜಯಲಲಿತಾ ಮತ್ತು ಸಹನಾ ಕಾಂತಬೈಲು ಅವರು ಆಯ್ಕೆ ಸಮಿತಿಯಲ್ಲಿದ್ದರು. ಈ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಇದೇ ವೇಳೆ, ಕೊಂಕಣಿ ಸಾಹಿತಿ ಮತ್ತು ಪತ್ರಕರ್ತ ಮಂಗಳೂರಿನ ಹೆನ್ರಿ ಮೆಂಡೊನ್ಸಾ ಅವರ ‘ರುಪಾನಿ ಅನಿ ರೂಪಕಾಂ’ ಸಾಹಿತ್ಯ ವಿಮರ್ಶೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾದ ಇಬ್ಬರೂ ಸಾಹಿತಿಗಳಿಗೆ ಸಾಹಿತ್ಯ ವಲಯದಿಂದ ಅಭಿನಂದನೆಗಳು ಸಲ್ಲಿಕೆಯಾಗಿವೆ.



