ಕೊಡಗು: 205 ಹೊಸ ಕೋವಿಡ್ ಪ್ರಕರಣ ದಾಖಲು

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು‌ ಜಿಲ್ಲೆಯಲ್ಲಿ ಮಂಗಳವಾರ 205 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 111, ಸೋಮವಾರಪೇಟೆ ತಾಲೂಕಿನಲ್ಲಿ 59 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 35 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 44,484ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 738 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 40,381ಮಂದಿ ಸೋಂಕು ಮುಕ್ತರಾದಂತಾಗಿದೆ. ಅಲ್ಲದೆ ಇದುವರೆಗೆ 442 ಮಂದಿ ಸಾವಿಗೀಡಾಗಿದ್ದಾರೆ.
ಪ್ರಸಕ್ತ ಜಿಲ್ಲೆಯಲ್ಲಿ 3661ಸಕ್ರಿಯ ಪ್ರಕರಣಗಳಿದ್ದು, 267 ಕಂಟೈನ್ ಮೆಂಟ್ ವಲಯಗಳಿವೆ. ಪಾಸಿಟಿವಿಟಿ ದರ ಶೇ.6.75ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!