206 ರ‍್ಯಾಲಿ, 80 ಸಂದರ್ಶನ: ದಾಖಲೆ ಬರೆದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

2024ರ ಲೋಕಸಭೆ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರ‍್ಯಾಲಿಗಳನ್ನು ನಡೆಸಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಒಟ್ಟು 206 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದಲ್ಲದೇ 3ನೇ ಅವಧಿಯಲ್ಲಿ ಅಧಿಕಾರಕ್ಕೆ ಬಂದರೆ ತಮ್ಮ ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದನ್ನೂ ಪ್ರಸ್ತಾಪಿಸಿದ್ದಾರೆ.

2024ರ ಲೋಕಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ತಮ್ಮ ಕೊನೆಯ ರ‍್ಯಾಲಿಯನ್ನು ಇಂದು (ಗುರುವಾರ) ನಡೆಸಿದರು. ಇದಾದ ನಂತರ ಧ್ಯಾನ ಮಾಡಲು ಕನ್ಯಾಕುಮಾರಿಗೆ ತೆರಳಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು. ಒಂದೇ ದಿನದಲ್ಲಿ ಹಲವು ರ‍್ಯಾಲಿಗಳನ್ನು ಉದ್ದೇಶಿಸಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನ ಸಾಮಾನ್ಯರಿಗೆ ತಿಳಿಸಿದ್ದರು. ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ 206 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಮಂತ್ರಿಯವರು ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಮೇಲೆ ಹೆಚ್ಚಾಗಿ ಗಮನಹರಿಸಿದ್ದಾರೆ. ಅಲ್ಲಿ ಅವರು ಕ್ರಮವಾಗಿ 31, 20, 19 ಮತ್ತು 18 ಕಾರ್ಯಕ್ರಮಗಳನ್ನು ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ 10 ವರ್ಷಗಳಲ್ಲಿ ಪತ್ರಕರ್ತರೊಂದಿಗೆ ಹೆಚ್ಚು ಮುಖಾಮುಖಿಯಾಗಿಲ್ಲ ಎಂಬ ಆರೋಪವಿತ್ತು. ಆದರೆ, ಈ ಬಾರಿ ಪ್ರಧಾನಿ ಮೋದಿ ಅವರು 80 ಸಂದರ್ಶನಗಳನ್ನು ನೀಡಿದ್ದಾರೆ. ರ‍್ಯಾಲಿಗಳ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅನೇಕ ಕಾರ್ಯಕ್ರಮಗಳು ಮತ್ತು ರೋಡ್ ಶೋಗಳನ್ನು ಸಹ ನಡೆಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಮೂರನೇ ಅವಧಿಯ ಮೊದಲ 125 ದಿನಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಸರ್ಕಾರ ರಚನೆಯಾದ ತಕ್ಷಣ ಮೂರನೇ ಅವಧಿಯ 125 ದಿನಗಳಲ್ಲಿ ಏನಾಗುತ್ತದೆ, ಸರ್ಕಾರ ಏನು ಮಾಡುತ್ತದೆ, ಸರ್ಕಾರ ಹೇಗೆ ಕೆಲಸ ಮಾಡುತ್ತದೆ, ಯಾರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂಬುದನ್ನು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದರಲ್ಲಿಯೂ 25 ದಿನ ವಿಶೇಷವಾಗಿ ಯುವಕರಿಗೆ ಒತ್ತು ನೀಡಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಯಾವ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂಬ ರೂಪುರೇಷೆಯನ್ನೂ ರೂಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!