ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೊಮಿನಿಕನ್ ರಿಪಬ್ಲಿಕ್ ದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಭಾರೀ ಮಳೆಗೆ ಮಕ್ಕಳು ಸೇರಿ 21 ಮಂದಿ ಮೃತಪಟ್ಟಿದ್ದಾರೆ.
ಕಳೆದ ಎರಡು ದಿನಗಳಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಮಳೆಗೆ ಕಟ್ಟಡಗಳು ಧರೆಗುರುಳಿವೆ. ನಮ್ಮ ದೇಶದ ಇತಿಹಾಸದಲ್ಲೇ ಇಷ್ಟೊಂದು ಮಳೆ ಇದೇ ಮೊದಲು, ತುರ್ತು ಕಾರ್ಯಾಚರಣೆ ನಡೆಯುತ್ತಲೇ ಇದೆ.
ಒಟ್ಟಾರೆ13 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧ್ಯಕ್ಷ ಯೂಯಿಸ್ ಅಬಿನಾಡರ್ ಮಾಹಿತಿ ನೀಡಿದ್ದಾರೆ.