ಕಲಬುರಗಿಯಲ್ಲಿ ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ.

ಅಸ್ವಸ್ಥರು ವಿಜಯಪುರ ಜಿಲ್ಲೆಯ ಚಡಚಣದ ಡೋಣಿ ನಿವಾಸಿಗಳು ಎಂದು ತಿಳಿದುಬಂದಿದೆ. ಆಳಂದ ಪಟ್ಟಣದಲ್ಲಿ ಡೋಣಿ ನಿವಾಸಿಗಳು ನಿನ್ನೆ ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು ಬಂದಿದ್ದರು. ಬಳಿಕ ಆಹಾರ ಸೇವಿಸಿ 21 ಮಂದಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಳಂದಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!