ಈ ಊರಿನಲ್ಲಿ 40 ದಿನಗಳಲ್ಲಿ 21 ಜನರಿಗೆ ಹೃದಯಾಘಾತ! ತನಿಖೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 21 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದ್ದಾರೆ.

ಈ ಸಂಬಂಧ ಸಾಂಕ್ರಾಮಿಕವಲ್ಲದ ರೋಗಗಳ ತಜ್ಞರ ತಂಡವು ತನಿಖೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಇದರಲ್ಲಿ ಹೃದಯಾಘಾತಕ್ಕೆ ಕಾರಣಗಳನ್ನು ಅಧ್ಯಯನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ತಿಳಿಸಿದ್ದಾರೆ.

ಸೋಮವಾರ ಹೃದಯಾಘಾತದಿಂದ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ. ಇತ್ತೀಚಿಗೆ ಹೃದಯಾಘಾತಕ್ಕೆ ಬಲಿಯಾದವರಲ್ಲಿ ಬಹುತೇಕ ಎಲ್ಲರೂ 30 ರಿಂದ 55 ವರ್ಷ ವಯಸ್ಸಿನವರು. ಬಹು ಕಾಯಿಲೆಗಳಿಂದ ಸಾವು ಸಂಭವಿಸಿರಬಹುದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ಕುಮಾರ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!