ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ರೂ. ಮೀಸಲಿಡಲಾಗಿದೆ.
ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭಿಸಲಾಗುವುದು. ಅಲ್ಲದೇ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ಕೂಡ ನೀಡಲಾಗುವುದು.
ಹುಬ್ಬಳ್ಳಿ ಹಾಗೂ ದಾವಣಗೆರೆಯ ಇಎಸ್‌ಐ ಆಸ್ಪತ್ರೆಗಳ ಬೆಡ್ ಸಂಖ್ಯೆ ಹೆಚ್ಚಳ, ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ನೀಡಲಾಗಿದೆ. ಜತೆಗೆ ಚಾಲಕರ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆ ಘೋಷಣೆಯಾಗಿದೆ.