LOKA ELECTION | ರಾಜ್ಯದ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭೆಯ ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ  ನಡೆದಿದ್ದು, ಮೊದಲ ದಿನವೇ 2,172 ಪ್ರಕರಣ ದಾಖಲಾಗಿದೆ.

ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದು, ಈ ಸಂಬಂಧ 2,172 ಪ್ರಕರಣಗಳು ದಾಖಲಾಗಿವೆ. ಅಬಕಾರಿ ಇಲಾಖೆ 3098 ಹೀನಸ್ ಪ್ರಕರಣಗಳನ್ನು ದಾಖಲಿಸಿದೆ.

ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕೆ 4789 ಪ್ರಕರಣ, ಎನ್​ಡಿಪಿಎಸ್​ ಕಾಯ್ದೆ ಅಡಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಜಪ್ತಿ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!