ಗಾಜಾ ನಗರದಲ್ಲಿ ಬೆಂಕಿ ದುರಂತ: 8 ಮಕ್ಕಳು ಸೇರಿ 21 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ಯಾಲೆಸ್ತೇನ್‌ನ ಗಾಜಾ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಉತ್ತರ ಗಾಜಾ ಪಟ್ಟಿಯಲ್ಲಿರುವ ಜಬಾಲಿಯಾ ಕ್ಯಾಂಪ್‌ನಲ್ಲಿರುವ ವಸತಿ ಕಟ್ಟಡದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಪಘಾತದಲ್ಲಿ ಎಂಟು ಮಕ್ಕಳು ಸೇರಿದಂತೆ 21 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಇಂಡೋನೇಷ್ಯಾದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಗಾಜಾದ ಅತ್ಯಂತ ಜನನಿಬಿಡ ಪ್ರದೇಶವಾದ ಜಬಾಲಿಯಾ ನಿರಾಶ್ರಿತರ ಶಿಬಿರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೊನೆಯ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ ಎಂದು ತಿಳಿದುಬಂದಿದೆ. ಸತ್ತವರಲ್ಲಿ ಹೆಚ್ಚಿನವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ವಿದೇಶದಲ್ಲಿದ್ದ ತಮ್ಮ ಕುಟುಂಬ ಸದಸ್ಯನೊಬ್ಬ ವಾಪಸ್‌ ಮನೆಗೆ ಮರಳಿದ ಸಂಭ್ರಮದಲ್ಲಿದ್ದ ಕುಟುಂಬ ಇದೀಗ ಮಸಣ ಸೇರಿದ್ದಾರೆ. ಅಪಘಾತ ಸಂಭವಿಸಿದ ಮನೆಯಲ್ಲಿ ಇಂಧನ ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ. ಸಂಭ್ರಮದ ಸಂದರ್ಭದಲ್ಲಿ ಮೇಣದಬತ್ತಿಗಳನ್ನು ಬೆಳಗಿಸಿದ್ದೇ ಬೆಂಕಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಈ ಅಪಘಾತದ ಬಗ್ಗೆ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಲ್ಲದೆ, ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ ಶುಕ್ರವಾರವನ್ನು ಶೋಕಾಚರಣೆಯ ದಿನವನ್ನಾಗಿ ಘೋಷಿಸಲಾಗಿದೆ. ಗಾಯಾಳುಗಳ ಕುಟುಂಬಕ್ಕೆ ಆಸರೆಯಾಗುವುದಾಗಿ ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!