ವೆನೆಜುವೆಲಾದಲ್ಲಿ ಭೂಕುಸಿತಕ್ಕೆ 22 ಬಲಿ, 50 ಮಂದಿ ಕಣ್ಮರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಅಮೆರಿಕದ ವೆನೆಜುವೆಲಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತಕ್ಕೆ 22 ಮಂದಿ ಮೃತಪಟ್ಟಿದ್ದಾರೆ.

ಭೂಕುಸಿತದಲ್ಲಿ 50 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಜಾರಿಯಲ್ಲಿದೆ. ದೇಶದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿದೆ. 22 ಮಂದಿ ಅವಶೇಷಗಳ ಅಡಿ ಸಿಲುಕಿ ಸಮಾಧಿಯಾಗಿದ್ದಾರೆ.

ನೈಸರ್ಗಿಕ ಸಂಪತ್ತು ಭಾರೀ ಪ್ರಮಾಣದಲ್ಲಿ ನಾಶವಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಮಧ್ಯ ವೆನೆಜುವೆಲಾದ ಲಾಸ್ ಟೆಜೆರಿಯಾಸ್ ಪಟ್ಟಣದಲ್ಲಿ ಹೆಚ್ಚು ಹಾನಿಯುಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!