ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ನೆಡುಂತೀವು ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ 22 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ. ಅಲ್ಲದೇ 3 ಮೀನುಗಾರರ ದೋಣಿಗಳನ್ನುವಶಪಡಿಸಿಕೊಂಡಿದೆ.
ಮೀನುಗಾರರನ್ನು ನಿರಂತರವಾಗಿ ಶ್ರೀಲಂಕಾ ಬಂಧಿಸುತ್ತಿರುವ ವಿಚಾರವಾಗಿ,ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಅವರು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಅವರಿಗೆ ಪತ್ರ ಬರೆದಿದ್ದರುಪತ್ರ ಬರೆದ ಬೆನ್ನಲ್ಲೇ ಮತ್ತೆ ಮೀನುಗಾರರ ಬಂಧನವಾಗಿದೆ.
ಬಂಧಿತ ಮೀನುಗಾರರ ಬಿಡುಗಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಇದು ಅವರ ದೈನಂದಿನ ಜೀವನ ಮತ್ತು ಜೀವನೋಪಾಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.