ಸಂಸತ್ ಮೇಲೆ ದಾಳಿಗೆ 22 ವರ್ಷ: ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ ಮೇಲೆ ನಡೆದ ದಾಳಿಗೆ ಇಂದು 22 ವರ್ಷ, ಈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ ಮೊಹಮ್ಮದ್ ಸಂಘಟನೆಗಳ ಭಯೋತ್ಪಾದಕರು ೨೨ ವರ್ಷಗಳ ಹಿಂದೆ ಇದೇ ದಿನ ಸಂಸತ್ ಸಂಕೀರ್ಣದ ಮೇಲೆ ದಾಳಿ ನಡೆಸಿದ್ದರು. ದಾಳಿಯಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ದಾಳಿ ನಡೆಸಿದ ಐವರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.

ಇಂದು 2001ರಲ್ಲಿ ಸಂಸತ್‌ನಲ್ಲಿ ನಡೆದ ದಾಳಿಯಲ್ಲಿ ಹುತಾತ್ಮರಾದ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯನ್ನು ಸ್ಮರಿಸುತ್ತೇವೆ. ಅಪಾಯದ ಸಂದರ್ಭದಲ್ಲಿ ಅವರ ಧೈರ್ಯ, ತ್ಯಾಗ ದೇಶ ಸದಾ ನೆನಪಿನಲ್ಲಿಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!