ಶ್ರೀನಗರ: ಇಲ್ಲಿನ ಶೋಪಿಯಾನ್ ಜಿಲ್ಲೆಯ ಟುರ್ಕ್ ವಂಗಮ್ ಪ್ರದೇಶದಲ್ಲಿ ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮತ್ತೆ ಮೂವರು ಉಗ್ರರನ್ನು ಸಂಹಾರ ಮಾಡಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆ ಜಂಟಿ ಈ ಕಾರ್ಯಾಚರಣೆ ನಡೆಸಿದ್ದು, ಮಂಗಳವಾರ ನಸುಕಿಗೆ ನಡೆದ ಎನ್ ಕೌಂಟರ್ ನಲ್ಲಿ ಮೂವರು ಅಪರಿಚಿತ ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ. ಉಗ್ರರು ಯಾವ ಗುಂಪಿಗೆ ಸೇರಿದವರು ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ ಒಟ್ಟು 17 ಉಗ್ರರನ್ನು ವಿವಿಧ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ.