220 ತಿಂಗಳ ಆಡಳಿತದಲ್ಲಿ 225 ಹಗರಣ: ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಧ್ಯ ಪ್ರದೇಶದಲ್ಲಿ ವರ್ಷಾಂತ್ಯಕ್ಕೆ ನಡೆಯುವ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಸೋಮವಾರ ಜಬಲ್ಪುರದಲ್ಲಿ ಚಾಲನೆ ನೀಡಿದ್ದಾರೆ .

ಬಳಿಕ ಮಾತನಾಡಿದ ಅವರು, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಮತ್ತು ಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ 220 ತಿಂಗಳ ಆಡಳಿತದಲ್ಲಿ 225 ಹಗರಣಗಳು ನಡೆದಿವೆ ಎಂದು ಆರೋಪಿಸಿದರು.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ನೌಕರಿ ನೀಡಿದ್ದು, ಈ ಅಂಕಿ ಅಂಶ ನನ್ನ ಗಮನಕ್ಕೆ ತಂದಾಗ ಇದು ಸತ್ಯವಾ ಎಂದು ಅನುಮಾನಗೊಂಡು ನನ್ನ ಕಚೇರಿಯಿಂದ ಮೂರು ಬಾರಿ ಪರಿಶೀಲನೆ ನಡೆಸಿದ್ದೇನೆ ಎಂದರು.

ಉಜ್ಜಯಿನಿಯ ಮಹಾಕಾಲ್ ಲೋಕ ಕಾರಿಡಾರ್ನಲ್ಲಿ ಆರು ವಿಗ್ರಹಗಳನ್ನು ಹಾನಿಗೊಳಿಸಿರುವ ವಿಚಾರವನ್ನು ಪ್ರಸ್ತಾಪಿಸಿದ ಪ್ರಿಯಾಂಕಾ, ಚೌಹಾಣ್ ಸರ್ಕಾರ ದೇವರನ್ನೂ ಸಹ ಉಳಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಾವು ಸಾಕಷ್ಟು ಡಬಲ್ ಮತ್ತು ಟ್ರಿಪಲ್ ಎಂಜಿನ್ ಸರ್ಕಾರಗಳನ್ನು ನೋಡಿದ್ದೇವೆ. ಆದರೆ ಹಿಮಾಚಲ ಮತ್ತು ಕರ್ನಾಟಕದ ಜನರು ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!