ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಒಮಿಕ್ರಾನ್ ಕಾಲಿಟ್ಟ ನಂತರ ಕೋವಿಡ್ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22,775 ಪ್ರಕರಣಗಳು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಇಲಾಖೆ, ಕಳೆದ 24 ಗಂಟೆಗಳಲ್ಲಿ 22,775 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 1,04,781 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ 406 ಮಂದಿ ಕೋವಿಡ್ ಗೆ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 4,81,486ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 8,949 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 3,43,75,312 ಜನ ಚೇತರಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಇದರ ನಡುವೆ ಒಮಿಕ್ರಾನ್ ಸೋಂಕಿತರ ಪ್ರಕರಣ ಕೂಡ ಹೆಚ್ಚಾಗಿದ್ದು, ದೇಶದಲ್ಲೀಗ 1,431 ಮಂದಿ ಒಮಿಕ್ರಾನ್ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ 454. ದೆಹಲಿ-351 ತಮಿಳುನಾಡು-118 ಹಾಗೂ ಕರ್ನಾಟಕದಲ್ಲಿ 34 ಸೋಂಕಿತರು ಪತ್ತೆಯಾಗಿದ್ದಾರೆ.