ಯುವತಿ ಜೀವ ಬಲಿಪಡೆದ ಬೆಂಗಳೂರು ಮಹಾಮಳೆ: ಮನೆಗೆ ಹಿಂತಿರುಗುತ್ತಿದ್ದಾಗ ದುರಂತ

ಹೊಸ ದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ನಗರದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆ ಅಬ್ಬರಕ್ಕೆ ರಸ್ತೆಗಳು ಹೊಳೆಯಂತಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ. ಅದರಲ್ಲಿಯೂ ನಿನ್ನೆ ರಾತ್ರಿ ಮಳೆಯ ರಭಸ ಮತ್ತಷ್ಟು ಜೋರಾಗಿದ್ದು, ಮಳೆ ಅವಘಡಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.
ಅಖಿಲಾ (23) ವಿದ್ಯುತ್ ಅಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.‌ ಬೆಂಗಳೂರಿನ ವೈಟ್‌ಫೀಲ್ಡ್ ಬಳಿ ಸೋಮವಾರ ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಖಿಲಾ ಶಾಲೆಯೊಂದರ ಆಡಳಿತ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ನಿನ್ನೆ ರಾತ್ರಿ ತನ್ನ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ನೀರಿನಿಂದ ತುಂಬಿದ ರಸ್ತೆಯನ್ನು ದಾಟುವಾಗ ಅವರ ಸ್ಕೂಟಿ ಸ್ಕಿಡ್ ಆಗಿದೆ. ಈ ಈ ವೇಳೆ ಕೆಳಗೆ ಬೀಳುತ್ತಿದ್ದ ಅಖಿಲಾ ಆಸರೆಗಾಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬವನ್ನು ಹಿಡಿಯಲು ಪ್ರಯತ್ನಿಸಿದ್ದಾಳೆ. ಆದರೆ ಅದರಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆ ವೇಳೆಗಾಗಾಗಲೇ ಆಕೆ ಮೃತಪಟ್ಟಿದ್ದಳು.
ಅಖಿಲಾ ಸಾವಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ)ನ ಅಸಮರ್ಪಕ ವ್ಯವಸ್ಥೆಗಳೇ ಕಾರಣ ಎಂದು ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಮಾರತಹಳ್ಳಿಯ ಔಟರ್ ​​ರಿಂಗ್ ರೋಡ್ – ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಭಾರೀ ಜಲಾವೃತ ಮತ್ತು ಸಂಚಾರ ದಟ್ಟಣೆ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!