ಉಕ್ರೇನ್‍ನಲ್ಲಿ ಸಿಲುಕಿರುವ 2,320 ಕೇರಳೀಯರು: ಭದ್ರತೆ ಕೋರಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಸಿಎಂ ಪತ್ರ

ದಿಗಂತ ವರದಿ ತಿರುವನಂತಪುರ:

ಉಕ್ರೇನ್‍ನಲ್ಲಿರುವ ಕೇರಳೀಯ ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸುವಂತೆ ಕೋರಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರಲ್ಲಿ ಕೇರಳದ 2320 ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪತ್ರವು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಯಸುತ್ತದೆ ಎಂದು ಉಲ್ಲೇಖಿಸಲಾಗಿದೆ.

ಉಕ್ರೇನ್‍ನಲ್ಲಿರುವ ಅನೇಕ ಮಂದಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಅಲ್ಲಿಯೇ ಇರಲು ನಿರ್ಧರಿಸಿದ್ದಾರೆ. ಅವರ ಸುರಕ್ಷತೆಗೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮರಳಲು ಬಯಸುವ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇದೇ ವೇಳೆ ರಷ್ಯಾವು ಉಕ್ರೇನ್ ಮೇಲೆ ಯುದ್ಧ ಸಾರಿದ್ದು , ಈ ನಿಟ್ಟಿನಲ್ಲಿ ಉಕ್ರೇನ್ ನಲ್ಲಿ ಆತಂಕಕಾರಿ ವಿದ್ಯಮಾನಗಳು ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!