Monday, March 27, 2023

Latest Posts

ಆಳವಾದ ಕಣಿವೆಗೆ ಬಿದ್ದ ಬಸ್:‌ 24ಮಂದಿ ಸ್ಥಳದಲ್ಲೇ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

60 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ್ದು, ಘಟನೆಯಲ್ಲಿ 24 ಮಂದಿ ಪ್ರಾಣ ಕಳೆದುಕೊಂಡಿದ್ದು, ಉಳಿದ ಪ್ರಯಾಣಿಕರು ಗಾಯಗೊಂಡಿರುವ ಭೀಕರ ದುರಂತ ಪೆರುವಿನಲ್ಲಿ ನಡೆದಿದೆ. ಬಸ್ ಕೊರಿಯಾಂಕಾ ಟೂರ್ಸ್ ಕಂಪನಿಗೆ ಸೇರಿದ್ದು ಎಂದು ವಿವರಿಸಲಾಗಿದೆ.

ಲಿಮಾದಿಂದ ತುಂಬೆಸ್ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ದುರಂತದ ಪ್ರದೇಶದಲ್ಲಿ ಪರಿಹಾರ ಕಾರ್ಯಗಳನ್ನು ಮುಂದುವರಿಸುವುದು ಕಷ್ಟದ ಕೆಲಸವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಬಸ್ ಅಪಘಾತದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ರಕ್ಷಣಾ ತಂಡಗಳು ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಗೊಂಡಿರುವ ಪ್ರಯಾಣಿಕರು ಪ್ರವಾಸಿಗರು ಎಂದು ತೋರುತ್ತದೆ. ಅವರಲ್ಲಿ ಹೆಚ್ಚಿನವರು ಹೈಟಿಯವರು ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಹೈಟಿಯಿಂದ ಪೆರುವಿಗೆ ಬರುವ ವಲಸಿಗರ ಸಂಖ್ಯೆಯೂ ಇತ್ತೀಚೆಗೆ ಹೆಚ್ಚುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!