ಭೀಕರ ರಸ್ತೆ ಅಪಘಾತ: ಬಸ್ ಪಲ್ಟಿಯಾಗಿ 24 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೊರಾಕೊದಲ್ಲಿ ಅತ್ಯಂತ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾದ ಪರಿಣಾಮ 24 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮೊರಾಕ್ಕೊದ ಅಜಿಲಾಲ್ ಸೆಂಟ್ರಲ್ ಪ್ರಾಂತ್ಯದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೆಮ್ನೇಟ್ ಪಟ್ಟಣದ ಮಾರುಕಟ್ಟೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!