ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಜುಲೈ 17 ಮತ್ತು 18ರಂದು ವಿರೋಧ ಪಕ್ಷದ ಮುಖಂಡರ ಜೊತೆ ಸಭೆ ನಡೆಯಲಿದ್ದು, ಕಾಂಗ್ರೆಸ್, ಟಿಎಂಸಿ, ಆಪ್ ಸೇರಿದಂತೆ 20ಕ್ಕೂ ಅಧಿಕ ವಿಪಕ್ಷಗಳ ಮುಖಂಡರು ಭಾಗಿಯಾಗಲಿದ್ದಾರೆ. ಬಿಹಾರದ ಪಾಟ್ನಾದಲ್ಲಿ 17 ಪಕ್ಷಗಳ ಮೊದಲ ಸಭೆ ನಡೆದಿತ್ತು. ಅದರ ಭಾಗವಾಗಿ ಎರಡನೇ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಸಭೆಗೆ ನಾಯಕಿ ಸೋನಿಯಾ ಗಾಂಧಿ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳಿಂದ ತಿಳಿದುಬಂದಿದೆ
ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕೇಳಿಬಂದಿದ್ದು, ನಿರೀಕ್ಷೆ ಹೆಚ್ಚಿದೆ.
ಪಾಟ್ನಾ ಸಭೆಯ ನಂತರ, ವಿರೋಧ ಪಕ್ಷಗಳ ಬಲ ಹೆಚ್ಚಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.