Sunday, October 1, 2023

Latest Posts

ಕಲುಷಿತ ಆಹಾರ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಪ್ರಾಂಶುಪಾಲ ಸಸ್ಪೆಂಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಲುಷಿತ ಆಹಾರ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

ಚಾಮರಾಜನಗರದ ಯಡವನಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ಎನ್ನುವವರನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಿಇಒ ಡಾ.ನವೀನ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಜು.18 ರಂದು ಕಲುಷಿತ ಆಹಾರ ಸೇವಿಸಿ ಒಟ್ಟು 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು, ನಂತರ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಇನ್ನು ವಸತಿ ನಿಲಯದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!