ದೇಶದಲ್ಲಿ 2,483 ಹೊಸ ಕೋವಿಡ್‌ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಒಟ್ಟೂ 2,483 ಕೋವಿಡ್‌ ಪ್ರಕರಣಗಳು ಕಂಡು ಬಂದಿದ್ದು ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ. ಸರ್ಕಾರಿ ಮಾಹಿತಿಗಳ ಪ್ರಕಾರ ಒಟ್ಟಾರೆಯಾಗಿ 15,636 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. 98.75% ಚೇತರಿಕೆ ದರವಿದ್ದು ಇಲ್ಲಿಯವರೆಗೂ ಒಟ್ಟಾರೆಯಾಗಿ 5,23,622 ಜನರು ಸಾವನ್ನಪ್ಪಿದ್ದಾರೆ.

ದೆಹಲಿಯಲ್ಲಿ 1,011 ಹೊಸ ಸೋಂಕುಗಳು ದಾಖಲಾಗಿದ್ದರೆ ಮಹಾರಾಷ್ಟ್ರದಲ್ಲಿ 84 ಸೋಂಕುಗಳು ವರದಿಯಾಗಿವೆ. ಉತ್ತರ ಪ್ರದೇಶದಿಂದ 200 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕರ್ನಾಟಕ, ದೆಹಲಿ, ಪಂಜಾಬ್, ಹರಿಯಾಣ, ಸೇರಿದಂತೆ ಹಲವು ರಾಜ್ಯಗಳು ಕೋವಿಡ್ ನಿಯಮಗಳನ್ನು ಮರಳಿ ಜಾರಿಗೆ ತಂದಿದ್ದು ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!