ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೋಣಿಗಳ ನಡುವೆ ಅಪಘಾತ: 25ಕ್ಕೂ ಹೆಚ್ಚು ಮಂದಿ ಸಾವು, 5 ಜನರ ರಕ್ಷಣೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

2 ದೋಣಿಗಳ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಠ 25 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.
ಇಲ್ಲಿನ ಶಿಬ್ಚಾರ್ ಪಟ್ಟಣದ ಸಮೀಪದಲ್ಲಿರುವ ಪದ್ಮಾ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಮುಖ್ಯಸ್ಥ ಮಿರಾಜ್ ಹೊಸೈನ್, ಎರಡು ದೋಣಿಗಳಲ್ಲಿ ಕನಿಷ್ಠ 30 ಮಂದಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಅಗ್ನಿ ಶಾಮಕದಳ ಕಾರ್ಯಾಚರಣೆ ನಡೆಸಿದ್ದು, ಇದರಲ್ಲಿ 25 ಮಂದಿ ಮೃತಪಟ್ಟಿದ್ದು, 5 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
30ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮರಳು ದೋಣಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಪ್ರಯಾಣಿಕರ ಸಂಖ್ಯೆ ಇನ್ನೂ ನಿಖರವಾಗಿ ತಿಳಿದಿಲ್ಲ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss