ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಮನುಷ್ಯ ೨೫ ತಲೆಬುರುಡೆಗಳು ಸಿಕ್ಕಿವೆ.
ಇದೇ ಗ್ರಾಮದ ಬಲರಾಮ್ ಎನ್ನುವ ವ್ಯಕ್ತಿ ಈ ತಲೆಬುರುಡೆಗಳನ್ನು ಸಂಗ್ರಹ ಮಾಡುತ್ತಿದ್ದಾನೆ ಎನ್ನುವ ಆರೋಪ ಎದುರಾಗಿದೆ. ಬುರುಡೆಗಳನ್ನು ಸಂಗ್ರಹಿಸಿ ಮಾಟಮಂತ್ರ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಹಾ ಶಿವರಾತ್ರಿಯ ಅಮವಾಸ್ಯೆ ಮುಗಿಯುತ್ತಿದ್ದಂತೆಯೇ ಈ ವ್ಯಕ್ತಿ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದುದನ್ನು ಗ್ರಾಮಸ್ಥರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಬಲರಾಮ್‌ನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.