ಚೀನಾದ ಕಲ್ಲಿದ್ದಲು ಕಂಪನಿಯ ಕಟ್ಟಡದಲ್ಲಿ ಅಗ್ನಿ ಅವಘಡ: 25 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿ ಕಂಪನಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 25 ಮಂದಿ ಅಸುನೀಗಿದ್ದಾರೆ. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಲ್ಯುಲಿಯಾಂಗ್ ನಗರದ ಲಿಶಿ ಜಿಲ್ಲೆಯಲ್ಲಿರುವ ಐದು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿದ್ದ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ರಕ್ಷಣಾ ಕಾರ್ಯಗಳು ಮುಂದುವರೆದಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!