ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಎರಡನೇ ಗ್ಯಾರಂಟಿ ಘೋಷಿಸಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ದೆಹಲಿ ನಿವಾಸಿಗಳಿಗೆ ಕಾಂಗ್ರೆಸ್ ಜೀವನ್ ರಕ್ಷಾ ಹೆಸರಿನಲ್ಲಿ 25 ಲಕ್ಷ ರೂ. ರೂಪಾಯಿಯ ವಿಮೆ ನೀಡಲಾಗುವುದು ಎಂದು ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ, ದೆಹಲಿಯ ಪ್ರತಿಯೊಬ್ಬ ನಾಗರಿಕರಿಗೂ 25 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಸಿಗುತ್ತದೆ ಎಂದು ಹೇಳಿದ್ದಾರೆ.
ಮಾಹಿತಿ ಪ್ರಕಾರ, ಜೀವನ ರಕ್ಷಾ ಯೋಜನೆಯಡಿ ದೆಹಲಿಯ ಎಲ್ಲಾ ನಾಗರಿಕರು 25 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ಪಡೆಯುತ್ತಾರೆ ಅಂದರೆ 25 ಲಕ್ಷದವರೆಗೆ ಉಚಿತ ಚಿಕಿತ್ಸೆ ಇರುತ್ತದೆ.