ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ದಿಗಂತ ವರದಿ ಶಿವಮೊಗ್ಗ:

ಕೊಲೆಯಾದ ಹಿಂದೂ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರದಿಂದ ಸಿಎಮ ಬಸವರಾಜ ಬೊಮ್ಮಾಯಿ ಅವರು 25 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮಾ. 6 ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಪರಿಹಾರದ ಚೆಕ್ ವಿತರಿಸಲಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಕೆಲವು ಮುಸಲ್ಮಾನ್ ಗೂಂಡಾಗಳು ಈ ಹತ್ಯೆ ಮಾಡಿದ್ದಾರೆ ಎಂದು ಪುನರುಚ್ಛರಿಸಿದ ಅವರು, ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ, ಆದರೆ, ಹತ್ಯೆ ಮಾಡುವ ಗೂಂಡಾಗಳು ಮುಸ್ಲಿಮರಲ್ಲಿ ಇದ್ದಾರೆ. ಈ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಮುಸ್ಲಿಂ ಮುಖಂಡರು ಕೂಡ ಇಂತಹ ಘಟನೆಗಳಾದಾಗ ಎಚ್ಚರಿಕೆಯಿಂದಿರಬೇಕು ಎಂದರು.

ಕಾಂಗ್ರೆಸ್ ನಾಯಕರು ಮತ್ತು ಕೆಲವು ಮುಸ್ಲಿಂ ಮುಖಂಡರು ಕೆಲವು ವರ್ಷಗಳ ಹಿಂದೆ ಹತ್ಯೆಯಾದ ವಿಶ್ವನಾಥ್ ಶೆಟ್ಟಿ ಅವರ ಮನೆಗೆ ಹೋಗಿ ಸಾಂತ್ವನ ಹೇಳುತ್ತಿದ್ದಾರೆ. ನಮಗೂ ಕೂಡ ಅವರ ತಾಯಿ ಚಿಂದಿ ಆಯುತ್ತಿರುವ ವಿಷಯ ಮಾಧ್ಯಮಗಳಲ್ಲಿ ಬಂದ ವರದಿ ನೋಡಿ ಗೊತ್ತಾಗಿದೆ. ಆದರೆ, ಬಿಜೆಪಿ ವಿಶ್ವನಾಥ್ ಹತ್ಯೆಯಾದಾಗ ಸುಮಾರು 18 ಲಕ್ಷ ರೂ. ನೀಡಿತ್ತು ಎಂದ ಅವರು ಈಗ ಕೆಲವರು ಇದನ್ನು ರಾಜಕೀಯಗೊಳಿಸಲು ಸಾಂತ್ವನ ಹೇಳುವ ನೆಪ ಮಾಡುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಟಿಕೆಟ್ ಹಂಚಿಕೆ ಮಾಡಲು ಬಿ.ಕೆ. ಹರಿಪ್ರಸಾದ್ ಯಾರು ಎಂದು ಪ್ರಶ್ನಿಸಿದ ಅವರು, ಅವರು ಹಿಂಬಾಗಿಲ ರಾಜಕಿಯ ಬಿಟ್ಟು ಯಸವುದಾದರೂ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಪಡೆದು ಗೆದ್ದು ಬರಲಿ. ಆ ಬಳಿಕ ನನ್ನ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!