ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮತ್ತು ಜೆಡಿಎಸ್‌ನ 25 ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದು, ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ. ಕಾಂಗ್ರೆಸ್ ಶೀಘ್ರವೇ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದು ತಮಾಷೆಯಾಗಿದೆ. ಅವರು ಎಷ್ಟು ದಿನ ರಾಜ್ಯಾಧ್ಯಕ್ಷರಾಗಿತ್ತಾರೆ? ಕುರ್ಚಿಯ ನಾಲ್ಕು ಕಾಲುಗಳಲ್ಲಿ ಮೂರು ನಾಲ್ಕು ಕಾಲುಗಳು ಈಗಾಗಲೇ ಮುರಿದಿವೆ. ಅವರ ಕುರ್ಚಿ ಒಂದೇ ಕಾಲಿನ ಮೇಲೆ ನಿಂತಿದೆ ಎಂದು ಲೇವಡಿ ಮಾಡಿದ್ದಾರೆ.