ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮುವಿನಿಂದ ದೋಡಾ ಜಿಲ್ಲೆಗೆ ತೆರಳುತ್ತಿದ್ದ ಬಸ್ ಉಧಮ್‌ಪುರದ ಬಟ್ಟಲ್ ಬಲ್ಲಿಯನ್ ಪ್ರದೇಶದಲ್ಲಿ ಪಲ್ಟಿಯಾಗಿದೆ. ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಉಧಮ್‌ಪುರದ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಆರು ಮಂದಿಯನ್ನು ಜಮ್ಮುವಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಳಿಕ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಬಸ್ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.