ಉತ್ತರಪ್ರದೇಶದಲ್ಲಿ ಭಾರೀ ಮಳೆಗೆ 25 ಮಂದಿ ಸಾವು, ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದಲ್ಲಿ ಎರಡು ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, 25 ಮಂದಿ ಮೃತಪಟ್ಟಿದ್ದಾರೆ.

ಮಳೆಯಿಂದ ಮನೆಕುಸಿತ ಹೆಚ್ಚಾಗಿದ್ದು, ಸಾವು ಸಂಭವಿಸಿದೆ. ಎರಡು ದಿನದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಇಂದು ಕೂಡ ಮಳೆ ಮುಂದುವರಿಯಲಿದೆ ಎನ್ನಲಾಗಿದೆ.

ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು, ಲಖನೌ, ನೋಯ್ಡಾ, ಗಾಜಿಯಾಬಾದ್, ಕಾನ್ಪುರ್, ರಾಂಪುರ ಮತ್ತು ಮೀರತ್‌ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!