ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ ನಿಂತಿದ್ದ ಬಸ್‌ಗೆ ಇನ್ನೊಂದು ಬಸ್‌ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಎರಡೂ ಬಸ್‌ಗಳಲ್ಲಿ ಪ್ರಯಾಣಿಕರಿದ್ದರು, ಈ ವೇಳೆ ಬಸ್‌ ಬಂದು ಗುದ್ದಿದ ರಭಸಕ್ಕೆ ಎರಡೂ ಬಸ್‌ಗಳಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವೇ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ.

ಘಟನೆ ಸಂಬಂಧ ಇರಿಜಂಲಕುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!