ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಪಾಕಿಸ್ತಾನದೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ.
ದಕ್ಷಿಣ ಏಷ್ಯಾ ರಾಷ್ಟ್ರ ಪಾಕಿಸ್ತಾನದ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಮೆರಿಕ ಒಪ್ಪಂದ ಮಾಡಿಕೊಂಡಿದೆ.
ಭಾರತ ನಮ್ಮ ಸ್ನೇಹಿತ ಎನ್ನುತ್ತಲೇ ಟ್ರಂಪ್ ಟ್ಯಾರಿಫ್ ಹಾಕಿದ್ದಾರೆ. ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ಅವರೊಂದಿಗೆ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ. ವಿಶ್ವದಲ್ಲೇ ಅತ್ಯಧಿಕವಾಗಿವೆ. ಭಾರತ ಯಾವಾಗಲೂ ತನ್ನ ಮಿಲಿಟರಿ ಉಪಕರಣಗಳ ಬಹುಪಾಲನ್ನು ರಷ್ಯಾದಿಂದ ಖರೀದಿಸುತ್ತದೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರಾಗಿದ್ದಾರೆ