ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದಲ್ಲಿರುವ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿರುವ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವರ್ಷದಿಂದೀಚೆಗೆ ಈ ಘಟನೆ ನಡೆದಿದೆ, ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಅವರು ಉದ್ಯಾನದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಹಿಂದೆ 2019 ಜನವರಿ ಹಾಗೂ 2022 ಜನವರಿ ನಡುವೆ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 13 ಹುಲಿಗಳು ನಾಪತ್ತೆಯಾಗಿರುವುದು ವರದಿಯಾಗಿತ್ತು ಎಂದು ಅವರು ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಹುಲಿಗಳ ಕುರಿತು ತನಿಖೆ ನಡೆಸಲು ವನ್ಯಜೀವಿ ಇಲಾಖೆ ಸೋಮವಾರ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನದ ಅಧಿಕಾರಿಗಳ ಕಡೆಯಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.
ಪ್ರಸ್ತುತ ಮೇ 17 ಮತ್ತು ಸೆಪ್ಟೆಂಬರ್ 30 ರ ನಡುವೆ ನಾಪತ್ತೆಯಾದ 14 ಹುಲಿಗಳ ಮೇಲೆ ಕೇಂದ್ರೀಕೃತವಾಗಿದೆ ಮತ್ತು ಇನ್ನೂ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಮಿತಿಯು ತನ್ನ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸಲಿದೆ. ನಾವು ಮೇಲ್ವಿಚಾರಣೆಯಲ್ಲಿ ಕೆಲವು ಲೋಪದೋಷಗಳನ್ನು ಗುರುತಿಸಿದ್ದೇವೆ ಎಂದಿದ್ದಾರೆ. ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಹುಲಿಗಳು ಕಂಡುಬಂದಿಲ್ಲ ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.