November 26, 2026
Thursday, November 26, 2026
spot_img

ಪ್ರಧಾನಿ ಸಾರ್ವಜನಿಕ ಜೀವನಕ್ಕೆ 25 ವರ್ಷ : ಡಿ. ಒಂದರಿಂದ ʼಸೇವಾ ದೂತʼ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ವಿಶೇಷ ಜನಸಂಪರ್ಕ ಅಭಿಯಾನಕ್ಕೆ ಸಜ್ಜಾಗಿದೆ. ಡಿಸೆಂಬರ್ 1ರಿಂದ 25ರವರೆಗೆ ‘ಸೇವಾ ದೂತ’ ಅಭಿಯಾನ ಹಮ್ಮಿಕೊಳ್ಳಲು ಪಕ್ಷ ನಿರ್ಧರಿಸಿದೆ.

25 ದಿನಗಳ ಈ ಅಭಿಯಾನದಡಿ ಬಿಜೆಪಿ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ದೇಶದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ವಾಸ್ತವ್ಯ ಹೂಡಿ ಜನರೊಂದಿಗೆ ನೇರ ಸಂಪರ್ಕ ಸಾಧಿಸಲಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ತಳಮಟ್ಟದಲ್ಲಿ ಎಷ್ಟರಮಟ್ಟಿಗೆ ಅನುಷ್ಠಾನಗೊಳ್ಳುತ್ತಿವೆ ಎಂಬುದನ್ನು ಪರಿಶೀಲಿಸಲಿದ್ದಾರೆ. ಅಲ್ಲದೆ, ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಸಾರ್ವಜನಿಕರ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಮುಂಬರುವ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಿಜೆಪಿ ನಿರ್ಧರಿಸಿದೆ. ಸ್ಥಳೀಯ ಜನರ ನಿರೀಕ್ಷೆಗಳನ್ನು ತಿಳಿದುಕೊಳ್ಳುವುದು, ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪಗಳನ್ನು ಗುರುತಿಸುವುದು ಹಾಗೂ ಪಕ್ಷದ ಜನಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಅವರನ್ನು ‘ಸೇವಾ ದೂತ’ ಅಭಿಯಾನದ ಸಂಚಾಲಕರನ್ನಾಗಿ ನೇಮಿಸಲಾಗಿದೆ. ದೇಶಾದ್ಯಂತ ಅಭಿಯಾನದ ಅನುಷ್ಠಾನದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಡಿಸೆಂಬರ್ 25ರಂದು ಆಚರಿಸಲಾಗುವ ಸುಶಾಸನ ದಿನದಂದು ಈ ಅಭಿಯಾನಕ್ಕೆ ತೆರೆ ಬೀಳಲಿದೆ.

Must Read